ತಾಯಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿ ಬಂಧನ

ತಾಯಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿ ಬಂಧನ

 





ಬೈಂದೂರು: ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿಯ ಕೊಲೆ ಪ್ರಕರಣ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.ಮೆಲ್ವಿನ್ ( 38) ಬಂಧಿತ ಕೊಲೆ ಆರೋಪಿ.


ಈತ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿಯಾಗಿದ್ದಾನೆ. ಬೈಂದೂರು ಠಾಣೆ ವ್ಯಾಪ್ತಿಯ ಕಾಲ್ತೊಡು ಬ್ಯಾತಿಯಾನಿ ಎಂಬಲ್ಲಿ ಈತ ತಲೆಮರೆಸಿಕೊಂಡಿದ್ದ. ಕೇರಳ ಪೊಲೀಸರ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ಮಂಜೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಬೈಂದೂರು ಪಿಎಸ್ ಐ ತಿಮ್ಮೇಶ್ ಬಿ.ಏನ್ ,ಕೊಲ್ಲೂರು 

ಪಿಎಸ್ಐ  ವಿನಯ್ . ಕೆ ಹಾಗೂ ಸಿಬ್ಬಂದಿಗಳಾದ ನಾಗೇಂದ್ರ,  ಪರಯ್ಯ ಮಠಪತಿ ,ಮಾಳಪ್ಪ ದೇಸಾಯಿ ,ಚಿದಾನಂದ ಪಾಲ್ಗೊಂಡಿದ್ದರು.

Ads on article

Advertise in articles 1

advertising articles 2

Advertise under the article