
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿ: ಹಬೀಬ್ ಅಲಿ
23/07/2025 04:06 AM
ಉಡುಪಿ: ಕರಾವಳಿ ಭಾಗದ ಉದ್ದಗಲಕ್ಕೂ ಮುಸ್ಲಿಂ ಸಮುದಾಯದ ಜನಸಂಖ್ಯೆಯು ವ್ಯಾಪಕವಾಗಿದೆ.ಅದಲ್ಲದೆ ಹಲವಾರು ವರ್ಷ ಗಳಿಂದ ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷ ವನ್ನು ಬೆಂಬಲಿಸಿಕೊಂಡು ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಇಷ್ಟರ ವರೆಗೆ ಮುಸ್ಲಿಂ ಸಮುದಾಯಕ್ಕೆ ಯಾವುದೇ ಅವಕಾಶ ಸಿಗಲಿಲ್ಲ.ಆದ್ದರಿಂದ ಈ ಬಾರಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯದ ಮುಖಂಡರಿಗೆ ನೀಡ ಬೇಕೆಂದು ಕೆಪಿಸಿಸಿ ಸಂಯೋಜಕ ಹಬೀಬ್ ಅಲಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ.