ಬೆಂಗಳೂರು: ಮುಡಾ ಹಗರಣ- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಗ್ ರಿಲೀಫ್

ಬೆಂಗಳೂರು: ಮುಡಾ ಹಗರಣ- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಗ್ ರಿಲೀಫ್

 

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬಿ.ಎಸ್‌ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದ ಇ.ಡಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠ ‘ರಾಜಕೀಯ ಹೋರಾಟಗಳು ಚುನಾವಣೆಯಲ್ಲಿ ನಡೆಯಲಿ. ನಿಮ್ಮನ್ನು ಯಾಕೆ ಬಳಸಿಕೊಳ್ಳಬೇಕು’ ಎಂದು ಚಾಟಿ ಬೀಸಿದೆ.

‘ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ. ಇಲ್ಲದಿದ್ದರೆ ಇ.ಡಿ ಬಗ್ಗೆ ತೀಕ್ಷ್ಣ ಟಿಪ್ಪಣಿ ಮಾಡಬೇಕಾದಿತು. ನನಗೆ ಇದರ ಬಗ್ಗೆ ಮಹಾರಾಷ್ಟ್ರದಲ್ಲಿ ಕೆಲವು ಅನುಭವಗಳಾಗಿವೆ. ದೇಶದಾದ್ಯಂತ ನೀವು ಇದನ್ನು ಮುಂದುವರಿಸಕೂಡದು’ ಎಂದು ಇ.ಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರೊಂದಿಗೆ ಸಿಜೆಐ ಸಿಟ್ಟು ಹೊರಹಾಕಿದರು.

Ads on article

Advertise in articles 1

advertising articles 2

Advertise under the article