
ಕುಂದಾಪುರ: 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
29/07/2025 12:29 PM
ಕುಂದಾಪುರ: ಕಳೆದ 2004ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಕಾಸರಗೋಡು ಮೂಲದ ಫಾರೂಕ್ ಬಂಧಿತ ಆರೋಪಿ.
ಈತನ ವಿರುದ್ದ ಎಲ್.ಪಿ.ಸಿ ವಾರಂಟು ಹೊರಡಿಸಿಲಾಗಿದ್ದು ಶಂಕರನಾರಾಯಣ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಿಶೇಷ ಪೊಲೀಸರ ತಂಡ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಬಂಧಿಸಿ ಉಡುಪಿಗೆ ಕರೆತಂದಿದೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.