ಮಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 61.15 ಲಕ್ಷ ರೂ. ವಂಚನೆ !

ಮಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 61.15 ಲಕ್ಷ ರೂ. ವಂಚನೆ !

 

ಮಂಗಳೂರು: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ಮಹಿಳೆಯನ್ನು ಬೆದರಿಸಿ ಆಕೆಯಿಂದ ಹಂತ ಹಂತವಾಗಿ ಒಟ್ಟು 61.15 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ 

ಜು.19ರಂದು ಬೆಳಗ್ಗೆ ಮಹಿಳೆಯೋರ್ವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿ ತಾನು ಮುಂಬಯಿಯ ಕೊಲಾಬಾ ಪೊಲೀಸ್‌ ಠಾಣೆಯಿಂದ ತನಿಖಾಧಿಕಾರಿ ಸಂದೀಪ್ ಮಾತನಾಡುತ್ತಿದ್ದು “ನಿಮ್ಮ ಗುರುತಿನ ಚೀಟಿ ಬಳಸಿ ಯಾರೋ ಮಾನವ ಕಳ್ಳಸಾಗಣೆ, ಡ್ರಗ್ಸ್ ದಂಧೆ ಮೊದಲಾದ ಅಕ್ರಮ ಚಟುವಟಿಕೆ ನಡೆಸುತ್ತಿದ್ದು ಇದಕ್ಕೆ ಕೆನರಾ ಬ್ಯಾಂಕ್ ಖಾತೆ ಬಳಸಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದಾರೆ. ನಿಮ್ಮನ್ನು ಡಿಜಿಟಲ್ ಅರೆಸ್ಟ್‌ಗೆ ಒಳಪಡಿಸುತ್ತೇವೆ. ನೀವು ಹಣ ನೀಡಬೇಕು. ಈ ವಿಷಯ ಯಾರಿಗೂ ತಿಳಿಸಬಾರದು' ಎಂದು ಬೆದರಿಸಿದ. ಇದರಿಂದ ಮಹಿಳೆ ಭಯಗೊಂಡಿದ್ದರು. ಅನಂತರ ಅದೇ ದಿನ ಮಧ್ಯಾಹ್ನ ಮತ್ತೂಮ್ಮೆ ಕರೆ ಮಾಡಿದ ವ್ಯಕ್ತಿ “ಈ ವಿಷಯವನ್ನು ಪತಿ ಹಾಗೂ ಇತರರಿಗೆ ತಿಳಿಸಿದರೆ ಪತಿಯ ಕೆಲಸ ತೆಗೆಸುತ್ತೇವೆ' ಎಂದು ಭಯ ಹುಟ್ಟಿಸಿದ.

ಮರುದಿನ ಮೋಹಿತ್ ಕುಮಾರ್ ಎಂಬಾತ ವಾಟ್ಸ್‌ಆ್ಯಪ್ ಕರೆ ಮಾಡಿ ಆ ವಿಷಯವನ್ನು ಮತ್ತೂಮ್ಮೆ ಪ್ರಸ್ತಾವಿಸಿ ಮಹಿಳೆಯ ವೈಯಕ್ತಿಕ ವಿವರ, ಪಾನ್‌ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಪಡೆದು ಬೆದರಿಸಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ. ಅದರಂತೆ ಮಹಿಳೆ ಜೂ. 21ರಿಂದ ಜು. 9ರ ವರೆಗೆ ಹಂತ ಹಂತವಾಗಿ 61,15,050 ರೂ.ಗಳನ್ನು ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಅನಂತರವೂ ಹೆಚ್ಚು ಹಣ ವರ್ಗಾಯಿಸುವಂತೆ ಆರೋಪಿಗಳು ಹೇಳಿದಾಗ ಮಹಿಳೆ ತನ್ನ ಪತಿ ಮತ್ತು ಮಕ್ಕಳಿಗೆ ವಿಚಾರ ತಿಳಿಸಿದರು. ತಾನು ಮೋಸ ಹೋಗಿರುವ ವಿಚಾರ ಅವರಿಗೆ ಗೊತ್ತಾಯಿತು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸರಿಗೆ ದೂರು ನೀಡಲಾಗಿದೆ

Ads on article

Advertise in articles 1

advertising articles 2

Advertise under the article