
ಧರ್ಮಸ್ಥಳ ಪ್ರಕರಣ: ಯಾರೋ ಹೇಳಿದ್ರು ಅಂತ ಎಸ್.ಐ.ಟಿ ರಚನೆ ಮಾಡಲು ಆಗೋದಿಲ್ಲ - ಸಿಎಂ ಸಿದ್ದರಾಮಯ್ಯ
ಮೈಸೂರು: ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಯಲ್ಲಿನ ಲೋಪಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.ಈ ಹಿನ್ನೆಲೆಯಲ್ಲಿ, ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರತೊಡಗಿವೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು , "ಯಾರೋ ಹೇಳಿದ್ರು ಅಂತ ಎಸ್.ಐ.ಟಿ ರಚನೆ ಮಾಡಲು ಆಗೋದಿಲ್ಲ. ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ರೆ ಎಸ್.ಐ.ಟಿ ರಚನೆ ಮಾಡ್ತೀವಿ" ಎಂದು ಮೈಸೂರಿನಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದ್ರೂ ನಾವು ಕೇರ್ ಮಾಡೋದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಗೋಪಾಲ್ ಗೌಡ ಸೇರಿದಂತೆ ಇನ್ಯಾರೋ ಹೇಳಿದರು ಅಂಥ ಎಸ್‌ಐಟಿ ರಚನೆ ಮಾಡುವುದಿಲ್ಲ. ತಪ್ಪೊಪ್ಪಿಗೆ ನೀಡಿದ ವ್ಯಕ್ತಿಯ ಹೇಳಿಕೆ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ವರದಿಯನ್ನು ಎರಡು ದಿನಗಳಲ್ಲಿ ಪರಿಶೀಲಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.