ಮಣಿಪಾಲ: ವೇಶ್ಯಾವಾಟಿಕೆ ದಂಧೆ- ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

ಮಣಿಪಾಲ: ವೇಶ್ಯಾವಾಟಿಕೆ ದಂಧೆ- ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

 

ಮಣಿಪಾಲ: ಮಣಿಪಾಲದ ಅಪಾರ್ಟ್‌ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅದೇ ಅಪಾರ್ಟ್‌ಮೆಂಟ್ ನ ಸೆಕ್ಯೂರಿಟಿ ಗಾರ್ಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಅಪಾರ್ಟ್‌ಮೆಂಟ್ ನ ಮನೆಗಳ ಮಾಲೀಕರು ಮನೆಯ ಬೀಗವನ್ನು ಸೆಕ್ಯೂರಿಟಿ ಗಾರ್ಡ್ ಬಳಿ ಕೊಟ್ಟು ಹೊರಗೆ ಹೋಗುತ್ತಿದ್ದರು.ಇದನ್ನು ದುರುಪಯೋಗಪಡಿಸಿ ಈ  ಸೆಕ್ಯೂರಿಟಿ ಗಾರ್ಡ್ ಮನೆಯ ಕೀಯನ್ನ ಬಳಸಿಕೊಂಡು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ.

ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮಂದಿಗೆ ಮನೆಯ ಕೀ ಯನ್ನು ಒಂದು ಸಾವಿರ ರೂಪಾಯಿಗಳಿಗೆ ನೀಡ್ತಿದ್ದ ಅನ್ನೋ ಮಾಹಿತಿ ಕೂಡ ಲಭ್ಯವಾಗಿದೆ. ಸದ್ಯ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇನ್ನೊಬ್ಬನಿಗೆ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article