ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿ.ಎಂ

ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿ.ಎಂ

 

ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. 

ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. 

ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ  ಬರುತ್ತೇನೆ ಎಂದು ಸವಾಲು ಹಾಕಿದರು. 

ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು.  ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಪ್ರತೀ ಬಾರಿ ಹಿಂಬಗಿಲಿನಿಂದ ಅಧಿಕಾರ ಹಿಡಿಯುತ್ತಿದ್ದಾರೆ. ಜೆಡಿಎಸ್‌ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದರು.

ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ. ರಾಜ್ಯದ ಜನರ ಪರವಾಗಿ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ ಎಂದರು.

Ads on article

Advertise in articles 1

advertising articles 2

Advertise under the article