ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ  ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ   ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಹಾಸನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಹಾಸನ ಮಹಾನಗರ ಪಾಲಿಕೆಗೆ ಅನುದಾನದ ಲಭ್ಯತೆ ಬಗ್ಗೆ  ಪರಿಶೀಲನೆ

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ  ಯಾವುದೇ  ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. 

ಅರಸೀಕೆರೆಯಲ್ಲಿ 750 ಕೋಟಿಗಳಿಗೂ ಹೆಚ್ಚು  ಮೊತ್ತದ ಕಾರ್ಯಕ್ರಮ

ಅರಸೀಕೆರೆಯಲ್ಲಿ ಇಂದು 750 ಕೋಟಿಗಳಿಗೂ ಹೆಚ್ಚು ಮೊತ್ತದ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಾಗುತ್ತಿದೆ ಎಂದರು.

Ads on article

Advertise in articles 1

advertising articles 2

Advertise under the article