ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗಕ್ಕೆ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಡಾ. ಗಣನಾಥ ಎಕ್ಕಾರು ನೇಮಕ



ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗಕ್ಕೆ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಡಾ. ಗಣನಾಥ ಎಕ್ಕಾರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರ ಆದೇಶಾನುಸಾರ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ತಾವು ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಮಾರ್ಗದರ್ಶನದಲ್ಲಿ ರಾಜ್ಯ ಮತ್ತು ಸ್ಥಳೀಯ ನಾಯಕರ ಸಹಕಾರದೊಂದಿಗೆ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗದ ಸಂಘಟನೆ ಬಲಪಡಿಸಲು ಮತ್ತು ಆ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಶುಭ ಹಾರೈಸುತ್ತೇನೆ ಎಂದು ಕೆಪಿಸಿಸಿ ಮುಖ್ಯ ವಕ್ತಾರ ರಘು ದೊಡ್ಡೇರಿ ಆದೇಶದಲ್ಲಿ ತಿಳಿಸಿದ್ದಾರೆ.