
ಧರ್ಮಸ್ಥಳ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ದರಾಮಯ್ಯ
ಮೈಸೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ,ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಶಾಲೆಗಳಿಗೆ ಬಾಂಬ್ ಕರೆ-ಪೊಲೀಸರಿಗೆ ತನಿಖೆ ನಡೆಸಲು ಸೂಚನೆ
ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.
ಬಿಜೆಪಿಯವರು ಪ್ರಧಾನಿ ಹುದ್ದೆಯನ್ನು ಪರಿಶಿಷ್ಟ ಜಾತಿಯವರಿಗೆ ಬಿಟ್ಟುಕೊಡಲಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು.