ಧರ್ಮಸ್ಥಳ ಹೆಣಹೂತ ಪ್ರಕರಣ-  ಕೊನೆಗೂ ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚಿಸಿ ಆದೇಶ

ಧರ್ಮಸ್ಥಳ ಹೆಣಹೂತ ಪ್ರಕರಣ- ಕೊನೆಗೂ ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚಿಸಿ ಆದೇಶ

 


ಧರ್ಮಸ್ಥಳ- ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತಿದ್ದೇನೆ ಎಂದು ಅಜ್ಞಾತ ವ್ಯಕ್ತಿಯು ಆರೋಪಿಸಿದ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಈ ಪ್ರಕರಣದ ತನಿಖೆ ನಡೆಸಲು ವಿಶೇಷ ತಂಡವನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತನಿಖಾ ತಂಡದ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ ಕುಮಾರ್ ಮೊಹಂತಿ ಅವರನ್ನು ನೇಮಿಸಲಾಗಿದ್ದು ತಂಡದಲ್ಲಿ IPS ಅಧಿಕಾರಿ ಎಂ.ಎನ್ ಅನುಚೇತ್. ಶ್ರೀಮತಿ ಸೌಮ್ಯ ಲತ IPS, ಹಾಗೂ ಜಿತೇಂದ್ರ ಕುಮಾರ್ IPS ಅವರನ್ನು ನೇಮಿಸಲಾಗಿದೆ.

 ಈ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶ ಈ ಕೆಳಗಿಂತಿದೆ.


"ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ "

Ads on article

Advertise in articles 1

advertising articles 2

Advertise under the article