ಉಳ್ಳಾಲ: ನವವಿವಾಹಿತ ಕುಸಿದುಬಿದ್ದು ಸಾವು

 

ಉಳ್ಳಾಲ: ಕೇವಲ ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಯುವಕನೊಬ್ಬ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಉಳ್ಳಾಲ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಮೃತಪಟ್ಟವರು.ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಭರತ್ 4 ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿತ್ತು, ಇವರ ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಅವರಿಗೆ ತಾಯಿ ಹಾಗೂ ಮೂವರು ಸೋದರಿಯರು ಇದ್ದಾರೆ.