
ಮಂಗಳೂರು: 22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ಮಗಳ ಹುಡುಕಿಕೊಡಿ ! ಎಸ್ಪಿಗೆ ದೂರು ನೀಡಿ ನ್ಯಾಯ ಕೋರಿದ ಯುವತಿಯ ತಾಯಿ
15/07/2025 03:39 PM
ಮಂಗಳೂರು: ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಇಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾದರು.
ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.
ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳಕ್ಕೆ ತೆರಳಿದವರು ನಾಪತ್ತೆಯಾಗಿದ್ದರು.