ಉಡುಪಿ: ಪತ್ರಕರ್ತರ ಸಂಪೂರ್ಣ ಆರೋಗ್ಯ ತಪಾಸಣೆಗೆ ಕೆಎಂಸಿಯಲ್ಲಿ ಚಾಲನೆ

ಉಡುಪಿ: ಪತ್ರಕರ್ತರ ಸಂಪೂರ್ಣ ಆರೋಗ್ಯ ತಪಾಸಣೆಗೆ ಕೆಎಂಸಿಯಲ್ಲಿ ಚಾಲನೆ

 

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಕಾರ್ಕಳ, ಕುಂದಾಪುರ, ಕಾಪು, ಬೈಂದೂರು, ಹೆಬ್ರಿ, ಬೈಂದೂರು ತಾಲೂಕು ಸಂಘಗಳ ಸಹಯೋಗದೊಂದಿಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಕಾರದೊಂದಿಗೆ ಪತ್ರಕರ್ತರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಇಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸಚಿನ್ ಕಾರಂತ್, ಮಾರುಕಟ್ಟೆ ವ್ಯವಸ್ಥಾಪಕ ಮೋಹನ್ ಶೆಟ್ಟಿ, ಸಂಘದ ಜಿಲ್ಲಾಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಕುಂದಾಪುರ ತಾಲೂಕು ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ, ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಹಂತಗಳಲ್ಲಿ ಒಟ್ಟು 50 ಮಂದಿ ಪತ್ರಕರ್ತರು ಮಧುಮೇಹ, ಕಿಡ್ನಿ, ಇಸಿಜಿ, ಇಕೋ, ಎಕ್ಸ್‌ರೇ, ಅಲ್ಟ್ರಾಸೌಂಡ್, ತಜ್ಞ ವೈದ್ಯರಿಂದ ಸಮಾಲೋಚನೆ ಸೇರಿದಂತೆ ಹಲವು ರೀತಿಯ ತಾಪಸಣೆ ಮಾಡಿಕೊಳ್ಳಲಿದ್ದಾರೆ.

Ads on article

Advertise in articles 1

advertising articles 2

Advertise under the article