
ಉಡುಪಿ: ಏಕ ವಿನ್ಯಾಸ ನಕ್ಷೆ ಅವ್ಯವಸ್ಥೆ- ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಏಕ ವಿನ್ಯಾಸ ನಕ್ಷೆ (9&11) ಅವ್ಯವಸ್ಥೆಯ ಮೂಲಕ ಜನ ಸಾಮಾನ್ಯರಿಗೆ ಸಮಸ್ಯೆ ಸೃಷ್ಟಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.ಪ್ರತಿಭಟನೆಯಲ್ಲಿ ಉಡುಪಿ ವಿಧಾನಸಭೆ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ರಾಜ್ಯ ಸರಕಾರದ ವೈಫಲ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ವಹಿಸಿದ್ದರು. ಸಭೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ಉಡುಪಿ ನಗರ ಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪಕ್ಷದ ಮುಖಂಡರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವಿಜಯ ಕೊಡವೂರು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.