ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ- ಎಸ್.ಐ.ಟಿ ಗೆ ಮತ್ತೆ 9 ಮಂದಿ ಪೊಲೀಸರ ನೇಮಕ

ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ- ಎಸ್.ಐ.ಟಿ ಗೆ ಮತ್ತೆ 9 ಮಂದಿ ಪೊಲೀಸರ ನೇಮಕ

 

ಬೆಳ್ತಂಗಡಿ : ಧರ್ಮಸ್ಥಳ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪಿಎಸ್‌ಐ ಲಾರೆನ್ಸ್, ಸೆನ್ ಪೊಲೀಸ್‌ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್‌ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ,ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್‌.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ ಮತ್ತು ಐಜಿಪಿ ಡಾ.ಎಂ.ಎ ಸಲೀಂ  ಅದೇಶ ಹೊರಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article