ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ- ಅಭಿವೃದ್ಧಿ ವಿಚಾರದಲ್ಲಿ  ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು- ಸುನಿಲ್ ಕುಮಾರ್

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ- ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು- ಸುನಿಲ್ ಕುಮಾರ್

 


ಕಾರ್ಕಳ; ಪರಶುರಾಮ ಥೀಂ ಪಾರ್ಕ್ ಹಾಗೂ ಪ್ರತಿಮೆಯ ಬಗ್ಗೆ ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಮಾನಕ್ಕೆ ಸೋಲಾಗಿದೆ. 

ಪ್ರತಿಮೆ ಫೈಬರ್ ದು ಎಂದು ನಡೆಸುತ್ತಿದ್ದ ಟೂಲ್ ಕಿಟ್ ಅಪಪ್ರಚಾರ ಸುಳ್ಳು ಎಂಬುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ. ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಕಾರ್ಕಳ‌‌ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಪರಶುರಾಮನ ಪ್ರತಿಮೆಯ ಸೊಂಟದ ಮೇಲ್ಭಾಗವನ್ನು ಮರು ವಿನ್ಯಾಸ ಉದ್ದೇಶದಿಂದ ತೆಗೆದಿದ್ದು ಎಂಬುದನ್ನೂ ನ್ಯಾಯಲಯಕ್ಕೆ  ಸ್ಪಷ್ಟಪಡಿಸಿದ್ದಾರೆ. ಇದರಿಂದ ಪ್ರತಿಮೆ ಫೈಬರ್ ದು ಎಂಬ ವ್ಯವಸ್ಥಿತ ಪಿತೂರಿಗೆ ಸೋಲಾಗಿದೆ.

ಇನ್ನಾದರೂ ರಾಜ್ಯ ಸರ್ಕಾರ ಪರಶುರಾಮ ಥೀಂ ಪಾರ್ಕ್ ಗೆ ನಿಗದಿ ಮಾಡಿದ್ದ ಅನುದಾನವನ್ನು ಬಿಡುಗಡೆ ಮಾಡುವ ಜತೆಗೆ ಈ ತಾಣವನ್ನು ಪ್ರವಾಸೋದ್ಯಮಕ್ಕೆ ಮತ್ತೆ ತೆರೆಯಬೇಕು. ಅಭಿವೃದ್ಧಿ ವಿಚಾರದಲ್ಲಿ ನಡೆಸುವ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕೆಂದು ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ ,ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article