
ಉಡುಪಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ- ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ
ಉಡುಪಿ: ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದ್ದು ಸರಕಾರದ ಈ ವರದಿಯನ್ನು ನಾನು ವಿರೋಧಿಸುತ್ತೇನೆ.ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್ ಮಾಫಿಯಾ ಇದರ ಹಿಂದಿದೆ ಎಂದು ಆರೋಪ ಮಾಡಿದ್ದಾರೆ.
ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ಸಹಾಯ ಪಡೆದು ಕಾಲ್ತುಳಿತ ನಡೆದ ಸ್ಥಳದಲ್ಲಿ ಗೊಂದಲ ಸೃಷ್ಟಿಸಲಾಗಿದೆ ಎಂದೂ ಅನುಪಮಾ ಗಂಭೀರ ಆರೋಪ ಮಾಡಿದ್ದಾರೆ.ಈ ಬಗ್ಗೆ ಮೆಜಿಸ್ಟಿರಿಯಲ್ ಎನ್ ಕ್ವಯರಿ ನಡೆಸುತ್ತಿರುವ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಗೆ ಪತ್ರ ಬರೆದಿದ್ದೇನೆ. ದಯಾನಂದ್ ಅವರು ಮುಂದೆ ಡಿಜಿಪಿ ಮತ್ತು ಐಜಿಪಿ ಆಗಿ ನೇಮಕವಾಗುವುದನ್ನು ತಡೆಯುವ ಉದ್ದೇಶ ಇದರಲ್ಲಿದೆ.ರನ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣ ಮೂಲಕ ರಾಮಚಂದ್ರ ರಾವ್ ಅವರಿಗೆ ಹಿನ್ನಡೆಯಾಗುವಂತೆ ಮಾಡಲಾಯಿತು ಎಂದಿರುವ ಅನುಪಮಾ ,ಡಿಜಿಪಿ ಸಲೀಂ ಅವರ ನೇಮಕಾತಿಯನ್ನೂ ಪ್ರಶ್ನಿಸಿದ್ದಾರೆ.
ಒಳಸಂಚುಗಳನ್ನು ರೂಪಿಸಿ ಸಲೀಂ ಅವರನ್ನು ನೇಮಿಸಲಾಗಿದೆ ಎಂದು ಆರೋಪಿಸಿರುವ ಅವರು,ದಯಾನಂದ್ ಮುಂದಿನ ಸೀನಿಯಾರಿಟಿಯಲ್ಲಿ ಇದ್ದಾರೆ.ಅಲೋಕ್ ಕುಮಾರ್ ಅವರ ಮೇಲೆ ಈಗಾಗಲೇ ಆರೋಪ ಹೊರಿಸಿ ದೂರವಿರಿಸಲಾಗಿದೆ.ದಯಾನಂದ್ ಅವರನ್ನು ಸಸ್ಪೆಂಡ್ ಮಾಡಿದ್ದು ಸಲೀಂ ಅವರು ಎಂದರು.
ಮೇಲ್ನೋಟಕ್ಕೆ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡುವ ಹುನ್ನಾರ ಕಂಡುಬರುತ್ತದೆ ಎಂದಿರುವ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ,ವಿರಾಟ್ ಕೊಹ್ಲಿ ಅವರ ಸಾಮಾಜಿಕ ಜಾಲತಾಣ ವಿಡಿಯೋ ನೋಡಿ ಜನ ಬಂದಿದ್ದಾರೆ ಎನ್ನಲಾಗುತ್ತಿದೆ.ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ.ಸಾಮಾಜಿಕ ಜಾಲತಾಣದ ವಿಡಿಯೋವನ್ನು ದೇಶವಿದೇಶಗಳಿಂದಲೂ ಲಕ್ಷಾಂತರ ಜನ ನೋಡುತ್ತಾರೆ.ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರಾ? ವಿರಾಟ್ ಕೊಹ್ಲಿ ವಿಡಿಯೋ ನೋಡಿದವರೆಲ್ಲಾ ಕಾರ್ಯಕ್ರಮದ ಸ್ಥಳಕ್ಕೆ ಬಂದ ಬಗ್ಗೆ ಸಿದ್ದರಾಮಯ್ಯನವರಲ್ಲಿ ದಾಖಲೆ ಇದೆಯಾ?ಕೂಡಲೇ ಸಿಎಂ ಸಿದ್ದರಾಮಯ್ಯ ವಿರಾಟ್ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.