
ಉಡುಪಿ: ಬಿಜೆಪಿ ಅಪಪ್ರಚಾರ ವಿರುದ್ಧ ಕಾಂಗ್ರೆಸ್ 'ಸತ್ಯದರ್ಶನ' ಪ್ರತಿಭಟನೆ
ಉಡುಪಿ: ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಉಡುಪಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 9/ 11 ಸಮಸ್ಯೆ , ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ ,ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ನಡೆಸುತ್ತಿರುವ ಸುಳ್ಳು ಪ್ರತಿಭಟನೆಗಳ ವಿರುದ್ಧ ಸತ್ಯಂಸ ತಿಳಿಸುವ ಪ್ರತಿಭಟನೆ ಇದು ಒಂದು ಕಾಂಗ್ರೆಸ್ ಹೇಳಿದೆ .ಈ ಪ್ರಯುಕ್ತ ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ ವನ್ನು ಹಮ್ಮಿಕೊಳ್ಳಲಾಗಿದೆ. ಧಾರಾಕರ ಸುರಿಯುತ್ತಿರುವ ಮಳೆಯ ನಡುವೆಯೂ ಪ್ರತಿಭಟನೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ವಿನಯ್ ಕುಮಾರ್ ಸೊರಕೆ ,ಅಶೋಕ್ ಕೊಡವೂರು ,ರಮೇಶ್ ಕಾಂಚನ್ ,ಪ್ರಸಾದ್ ಕಾಂಚನ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.