
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
23/07/2025 01:29 AM
ಬೆಳ್ತಂಗಡಿ : ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕ ಬಸವರಾಜ್ ಪೊಲೀಸ್ ಪಾಟೀಲ್ (35) ಅವರ ಮೃತದೇಹ ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬಸವರಾಜ್ ಅವರು ಮಂಗಳವಾರ ಶಾಲೆಯಿಂದ ನಾಪತ್ತೆಯಾಗಿದ್ದರು. ಶಾಲೆಯ ಅಡುಗೆ ಕೋಣೆಯ ಕೀ ಅವರ ಬಳಿಯಲ್ಲಿತ್ತು. ಊರು ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದರಿಂದ ಮನೆಯವರು ಆತಂಕಗೊಂಡಿದ್ದರು.ಜುಲೈ 20ರಂದು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗದ ಹಳೆಯ ರಸ್ತೆಯಲ್ಲಿ ಬಸವರಾಜ್ ಅವರ ಮೃತ ದೇಹ ಪತ್ತೆಯಾಗಿದೆ.ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.