
ಉಡುಪಿ: ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನ- ಆರೋಪಿ ಬಂಧನ
27/07/2025 12:27 PM
ಉಡುಪಿ: ಜುಲೈ 26 ರಂದು ರಾತ್ರಿ 2.30 ಗಂಟೆ ವೇಳೆಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯವರು ವಿಚಾರಣೆ ಮಾಡಿದಾಗ ಅವರನ್ನು ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು ,ಬಂಧಿತ ವ್ಯಕ್ತಿಯನ್ನು ಸಾಗರ್ (25)
ಜುಮಾದಿನಗರ ಎಂದು ಗುರುತಿಸಲಾಗಿದೆ.ಈತ ಕೊಡವೂರು ಗ್ರಾಮದ ನಿವಾಸಿ. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.