
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೇವಲ ಜಾತಿ ಧರ್ಮಕ್ಕೆ ಮೀಸಲಿಡದೇ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಿ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಎಂ.ಎಸ್ ಸೈಯ್ಯದ್ ನಿಜಾಮುದ್ದೀನ್
24/07/2025 02:52 PM
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತಿರುವ ಹಾಗೂ ಪಕ್ಷಕ್ಕೆ ನಿಷ್ಠಾವಂತರಾಗಿರುವ ಕಾರ್ಯಕರ್ತನಿಗೆ ನೀಡಬೇಕು.ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತಿರುವ ಸಕ್ರಿಯ ಕಾರ್ಯಕರ್ತರನ್ನು ಕಡೆಗಣಿಸಿ ಜಾತಿ ಧರ್ಮವನ್ನು ಆಧರಿಸಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನೀಡುವುದು ಪಕ್ಷಕ್ಕೆ ಮಾರಕ. ಸಾಮಾನ್ಯ ಹಾಗೂ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನವನ್ನು ನೀಡುವುದರ ಮೂಲಕ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸಕ್ಕೆ ಪಕ್ಷದ ನಾಯಕರು ಶ್ರಮಿಸಬೇಕಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಎಂ.ಎಸ್ ಸೈಯದ್ ನಿಜಾಮುದ್ದೀನ್ ಆಗ್ರಹಿಸಿದ್ದಾರೆ.