ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥಾನ ಕಳ್ಳತನಕ್ಕೆ ಯತ್ನ; ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು !

ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥಾನ ಕಳ್ಳತನಕ್ಕೆ ಯತ್ನ; ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು !

 


ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯ ಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ.  ಸಿಸಿ ಟಿವಿ ಪರಿಶೀಲಿಸಿದಾಗ ಇಬ್ಬರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ‌ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಕಳ್ಳರು ಓಡುತ್ತ ಸಾಗುವಾಗ ಓರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುರುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು‌, ಓಡಲು ಯತ್ನಿಸಿದರೂ ಸಿಕ್ಕಿಬಿದ್ದಿದ್ದಾನೆ. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ‌ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ. ಕಳ್ಳರು ಕೇರಳ ಮೂಲದವರೆಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ. ದುಷ್ಕೃತ್ಯ ಎಸಗಲು ಬಂದಿರುವ ಕಳ್ಳನಿಗೆ ಕಡಿಯಾಳಿ ಮಹಿಷಮರ್ಧಿನಿ ದೇವಿಯೇ‌ ಮೂರ್ಛೆ ಭರಿಸಿದ್ದಾಳೆ ಎಂದು ಭಕ್ತರು  ಆಡಿಕೊಳ್ಳುತ್ತಿದ್ದಾರೆ. ದೇವಸ್ಥಾನದ ಕಾವಲುಗಾರನ ಕರ್ತವ್ಯ ಪ್ರಜ್ಞೆಗೂ ಶ್ಲಾಘನೆ ವ್ಯಕ್ತವಾಗಿದೆ.

Ads on article

Advertise in articles 1

advertising articles 2

Advertise under the article