
ಹೊಸದಿಲ್ಲಿ: ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಪ್ರಮಾಣ ವಚನ ಸ್ವೀಕಾರ
26/07/2025 07:25 AM
ಹೊಸದಿಲ್ಲಿ: ಬಹುಭಾಷಾ ನಟ ಮತ್ತು ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 69 ವರ್ಷದ ನಟ ತಮ್ಮ ರಾಜಕೀಯ ಜೀವನದಲ್ಲಿ ಹೊಸ ಹೆಜ್ಜೆ ಹಾಕಿದ್ದಾರೆ. ತಮಿಳು ನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆ ಸದಸ್ಯರಾಗಿ ನೇಮಕಗೊಂಡಿರುವ ಅವರು ತಮಿಳಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾತನಾಡಿ, “ನನಗೆ ತುಂಬ ಹೆಮ್ಮೆಯಾಗಿದೆ' ಎಂದರು. ಜೂ.12ರಂದು ಕಮಲ್ ಹಾಸನ್ ಮತ್ತು ಇತರ ಐವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.