ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ದೋಣಿ ಮಗುಚಿ ಮೃತಪಟ್ಟ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ. ತಿಂಗಳಾಯರ ಮನೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕಾಪು ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕೆ ಇಲಾಖೆ ಸಚಿವರಾದ ಮಾಂಕಾಳ ವೈದ್ಯರಿಗೆ ಘಟನೆಯ ಮಾಹಿತಿ ನೀಡಿ, ತಕ್ಷಣ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರವನ್ನು ಒದಗಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ಬಿಜೆಪಿ ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ಸುವರ್ಣ, ಚೇತನ್, ನಾಡದೋಣಿ ಮೀನುಗಾರ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
