Udupi: ಉಡುಪಿಯಲ್ಲಿ ಭಾರೀ ಮಳೆ

 



ಉಡುಪಿ: ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆಯಿಂದ ಉತ್ತಮ ಮಳೆಯಾಗುತ್ತಿದೆ. ವಿವಿಧೆಡೆ ಗಾಳಿಯ ತೀವ್ರತೆಯೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಿನವರೆಗೂ ರೆಡ್ ಅಲರ್ಟ್ ಇದ್ದು, ಅನಂತರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಗುರುವಾರ ಸಂಜೆಯಿಂದ ಬೈಂದೂರು, ಕುಂದಾಪುರ, ಕೋಟ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಪಡುಬಿದ್ರಿ, ಉಚ್ಚಿಲ, ಕಾಪು, ಶಿರ್ವ, ಕಟಪಾಡಿ, ಮಲ್ಪೆ ಉಡುಪಿ ಹಾಗೂ ಮಣಿಪಾಲದಲ್ಲಿ ಉತ್ತಮ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು ಮಳೆ ಹೀಗೆಯೇ ಮುಂದುವರಿದರೆ ಜಲಾವೃತವಾಗುವ ಸಾಧ್ಯತೆಗಳಿವೆ.