
ಧರ್ಮಸ್ಥಳ ಷಡ್ಯಂತ್ರ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಆರೋಪ - ಸೆಂಥಿಲ್ ಫಸ್ಟ್ ರಿಯಾಕ್ಷನ್
ಧರ್ಮಸ್ಥಳದ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ಸಿನ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ಹೆಸರು ತುಳುಕು ಹಾಕುತ್ತಿತ್ತು. ಬಿಜೆಪಿ ಶಾಸಕರೊಬ್ಬರು ನೇರವಾಗಿ ಅವರ ಹೆಸರನ್ನು ಉಲ್ಲೇಖಿಸಿದ್ದರು. ಇದಕ್ಕೆ, ಸಸಿಕಾಂತ್ ಸೆಂಥಿಲ್ ಮೊದಲ ಬಾರಿಗೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ.ಜನಾರ್ದನ ರೆಡ್ಡಿಯವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ದಕ್ಷಿಣ ಕನ್ನಡಕ್ಕೂ ಮುನ್ನ ನಾನು ಬಳ್ಳಾರಿಯಲ್ಲಿ ಸಹಾಯಕ ಆಯುಕ್ತನಾಗಿದ್ದೆ, ಆ ವೇಳೆ, ಅವರ ಅಕ್ರಮಗಳನ್ನು ಬಯಲಿಗೆಳೆದಿದ್ದೆ. ಬಹುಷಃ ಆ ಕಾರಣಕ್ಕಾಗಿ ಅವರು ನನ್ನ ಮೇಲೆ ಈ ಆರೋಪವನ್ನು ಮಾಡಿರಬಹುದು" ಎಂದು ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್, ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
2009ರ ಐಎಎಸ್ ಬ್ಯಾಚ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್, ಭಾರತ ಸರ್ಕಾರದ ನೀತಿಯನ್ನು ವಿರೋಧಿಸಿ ಸೆಪ್ಟಂಬರ್ 2019ರಂದು ರಾಜೀನಾಮೆಯನ್ನು ನೀಡಿದ್ದರು. ನವೆಂಬರ್ 2020ರಲ್ಲಿ ಆಗಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದರು.