
ಬೆಳ್ತಂಗಡಿ: ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ FIR
10/08/2025 12:37 AM
ಬೆಳ್ತಂಗಡಿ: ಧರ್ಮ – ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಎಂಬಾತ ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(ಎ), 353(2) ಬಿಎನ್ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.