ಧರ್ಮಸ್ಥಳ: ಮಹೇಂದ್ರ ಕಂಪೆನಿಯಿಂದ ವೀರೇಂದ್ರ ಹೆಗ್ಗಡೆಯವರಿಗೆ ನೂತನ ಕಾರು ಕೊಡುಗೆ

ಧರ್ಮಸ್ಥಳ: ಮಹೇಂದ್ರ ಕಂಪೆನಿಯಿಂದ ವೀರೇಂದ್ರ ಹೆಗ್ಗಡೆಯವರಿಗೆ ನೂತನ ಕಾರು ಕೊಡುಗೆ

 


ಧರ್ಮಸ್ಥಳ:  ಮಹೀಂದ್ರ & ಮಹೀಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. ೬ ಕಾರನ್ನು  ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದೆ.

ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ಕಂಪೆನಿಯ ಸಂಪ್ರದಾಯವಾಗಿದೆ. ಈ ಹಿಂದೆಯೂ ಕಂಪೆನಿ ಧರ್ಮಸ್ಥಳಕ್ಕೆ  ನೂತನ ಮಾದರಿಯ ಕಾರನ್ನು ಕೊಡುಗೆಯಾಗಿ ನೀಡಿದೆ. 

ವೀರೇಂದ್ರ ಹೆಗ್ಗಡೆಯವರು ಕಾರನ್ನು ಚಾಲನೆ ಮಾಡಿ ಶುಭ ಹಾರೈಸಿದರು.ಹೊಸ ಕಾರಿನ ಕೀಯನ್ನು ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ಹಸ್ತಾಂತರಿಸಿದರು.

ಕಂಪೆನಿಯ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೇ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ ಎಂದರು.

Ads on article

Advertise in articles 1

advertising articles 2

Advertise under the article