ಬ್ರಹ್ಮಾವರ ಪೊಲೀಸ್ ಠಾಣೆಯ 500 ಮೀ. ವ್ಯಾಪ್ತಿಯಲ್ಲಿ 24 ತಾಸು ನಿಷೇಧಾಜ್ಞೆ ಜಾರಿ !

ಬ್ರಹ್ಮಾವರ ಪೊಲೀಸ್ ಠಾಣೆಯ 500 ಮೀ. ವ್ಯಾಪ್ತಿಯಲ್ಲಿ 24 ತಾಸು ನಿಷೇಧಾಜ್ಞೆ ಜಾರಿ !

 


ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಇವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರಲಾಗುತ್ತಿದೆ. ಇವರು ಸಕ್ರಿಯ ಹಿಂದೂ ಕಾರ್ಯಕರ್ತರಾಗಿದ್ದು, ಸೌಜನ್ಯ ಪರ ಹೋರಾಟಗಾರರಾಗಿದ್ದು, ಇವರನ್ನು ಬ್ರಹ್ಮಾವರ ಠಾಣೆಗೆ ತನಿಖೆಗೆ ಕರೆ ತರುವಾಗ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು 21/08/2025 ರಂದು ಅಪರಾಹ್ನ 1 ಗಂಟೆಯಿಂದ 22/08/2025ರ ಅಪರಾಹ್ನ 1ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಅಧೀಕ್ಷಕರ ಮನವಿಯಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಈ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ  ಜಿಲ್ಲಾಧಿಕಾರಿ ಸ್ವರೂಪ್ ಟಿ. ಕೆ ಈ ಆದೇಶ ಹೊರಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article