
ಬೆಂಗಳೂರು: ಮತಗಳ್ಳತನ ಆರೋಪ - ಆಗಸ್ಟ್ 8 ರಂದು ಪ್ರತಿಭಟನೆಗೆ ಸಿಎಂ ನೇತೃತ್ವದಲ್ಲಿ ಪೂರ್ವಭಾವಿ ಸಭೆ
06/08/2025 03:00 PM
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವ್ಯವಸ್ಥಿತ ಮತಕಳ್ಳತನದ ವಿರುದ್ಧ ದೇಶಾದ್ಯಂತ ನಡೆಯುವ ಪ್ರತಿಭಟನಾ ಅಭಿಯಾನದ ಭಾಗವಾಗಿ ಬೆಂಗಳೂರಿನಲ್ಲಿ ಆಗಸ್ಟ್ 8 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.
ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಉಸ್ತುವಾರಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಸಚಿವರು, ಶಾಸಕರು ಮತ್ತು KPCC ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದರು.