ಬ್ರಹ್ಮಾವರ: ಇಂದು ತಿಮರೋಡಿಗೆ ಸಿಗುತ್ತಾ  ಜಾಮೀನು? ಎಫ್ ಐ ಆರ್ ರದ್ದತಿಗೆ  ಹೈಕೋರ್ಟ್ ಗೂ  ಅರ್ಜಿ ಸಲ್ಲಿಸಿರುವ ತಿಮರೋಡಿ ಮಹೇಶ್ ಶೆಟ್ಟಿ

ಬ್ರಹ್ಮಾವರ: ಇಂದು ತಿಮರೋಡಿಗೆ ಸಿಗುತ್ತಾ ಜಾಮೀನು? ಎಫ್ ಐ ಆರ್ ರದ್ದತಿಗೆ ಹೈಕೋರ್ಟ್ ಗೂ ಅರ್ಜಿ ಸಲ್ಲಿಸಿರುವ ತಿಮರೋಡಿ ಮಹೇಶ್ ಶೆಟ್ಟಿ

 


ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಆ. 23ರಂದು ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆಯಲಿದೆ. 

ಇಂದು (ಶನಿವಾರ) ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ತಿಮರೋಡಿಯನ್ನು ಕರೆತರುವುದು ಅನುಮಾನ ಎನ್ನಲಾಗುತ್ತಿದೆ. ಜೈಲಿನಲ್ಲಿ ಅವರ ಆರೋಗ್ಯ ತಪಾಸಣೆ ಮುಂದುವರಿದಿದೆ ಎಂಬ ಮಾಹಿತಿ ಲಭಿಸಿದೆ.

ಎಫ್‌ಐಆ‌ರ್ ರದ್ದು ಕೋರಿ ತಿಮರೋಡಿ ಹೈಕೋರ್ಟ್‌ಗೆ

ಇದೇ ವೇಳೆ  ಬಿ.ಎಲ್. ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತಂತೆ ಕ್ರಿಮಿನಲ್ ಅರ್ಜಿ ಸಲ್ಲಿಸಿರುವ ತಿಮರೋಡಿ, ಬ್ರಹ್ಮಾವರ ಪೊಲೀಸರು ಮತ್ತು ಪ್ರಕರಣದ ದೂರುದಾರ ರಾಜೀವ್ ಕುಲಾಲ್ ಅವರನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಧಿಯಾಗಬೇಕಿದೆ.

ರಾಜೀವ್ ಕುಲಾಲ್ ಮತ್ತು ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆತನ ವಿರುದ್ದ ನಾನು ಯಾವುದೇ ಅವಹೇಳಕಾರಿ ಹೇಳಿಕೆ ನೀಡಿಲ್ಲ. ಮೂರನೇ ವ್ಯಕ್ತಿಯಾದ ಬಿ.ಎಲ್. ಸಂತೋಷ್ ಪರವಾಗಿ ಕುಲಾಲ್ ದೂರು ದಾಖಲಿಸಿದ್ದಾರೆ. ಆತ ದಾಖಲಿಸಿದ ದೂರು ಆಧರಿಸಿ 2025ರ ಆ.21ರಂದು ತಮ್ಮನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಮರೋಡಿ ಉಲ್ಲೇಖಿಸಿದ್ದಾರೆ.

ದೂರು ದಾಖಲಾದ ಕೂಡಲೇ ಪೊಲೀಸರು ತರಾತುರಿಯಲ್ಲಿ ತನ್ನ ಪತ್ನಿಗೆ ಮೊದಲ ನೋಟಿಸ್ ನೀಡಿದ್ದಾರೆ. ಅನಂತರ ಎರಡನೇ ನೋಟಿಸ್‌ ನೀಡಿದ್ದಾರೆ.ಈ ಎರಡೂ ನೋಟಿಸ್ ನೀಡುವಾಗ ನಿಗದಿತ ನಿಯಮಗಳನ್ನು ಪಾಲಿಸಿಲ್ಲ. ತನ್ನನ್ನು ಬಂಧಿಸಲು ಸೂಕ್ತ ಕಾರಣ ನೀಡಿಲ್ಲ. ಬಂಧನ ಮಾಹಿತಿ ಕುರಿತು ತಮ್ಮ ಕುಟುಂಬದವರಿಗೆ ಅರೆಸ್ಟ್ ಮೆಮೊ ಕೂಡ ನೀಡಿಲ್ಲ. ಇದರಿಂದ ಬಂಧನ ಪ್ರಕ್ರಿಯೆ ದೋಷಪೂರಿತವಾಗಿದ್ದು, ಎಫ್‌ಐಆರ್ ರದ್ದುಪಡಿಸಬೇಕು ಎಂದು ತಿಮರೋಡಿ ಅರ್ಜಿಯಲ್ಲಿ ಕೋರಿದ್ದಾರೆ.

Ads on article

Advertise in articles 1

advertising articles 2

Advertise under the article