
ಬಿಹಾರ: ರಾಹುಲ್ ಗಾಂಧಿ ಜನ ಮತಾಧಿಕಾರ್ ರ್ಯಾಲಿಯಲ್ಲಿ ಸಿದ್ದರಾಮಯ್ಯ ಭಾಗಿ
29/08/2025 02:50 PM
ಬಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಜನ ಮತಾಧಿಕಾರ್ ಯಾತ್ರೆಯಲ್ಲಿ ಜೊತೆಯಾಗಿ ಬಿಹಾರದ ಗೋಪಾಲ್ ಗಂಜ್ ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಂಡರು.
ಸಿಎಂಗೆ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಡಾ. ಸುಧಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜೊತೆಯಾಗಿದ್ದಾರೆ.