ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಮೀಸಲಾತಿಯ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಮೀಸಲಾತಿಯ ಅಂತಿಮ ವರದಿ ಸಲ್ಲಿಕೆ

 

ಬೆಂಗಳೂರು: ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ ದಾಸ್ ಆಯೋಗ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ.‌ ಆಯೋಗವು ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಸೇರಿದಂತೆ ಸುಮಾರು 1,766 ಪುಟಗಳು ಮತ್ತು ಆರು ಶಿಫಾರಸುಗಳನ್ನೊಳಗೊಂಡ ವರದಿಯನ್ನು ನೀಡಿದೆ.

2025 ಮೇ 5 ರಿಂದ ಜುಲೈ 6 ರ ವರೆಗೆ ಸಮಗ್ರ ಸಮೀಕ್ಷೆ ನಡೆಸಲಾಗಿದೆ. ರಾಜ್ಯದ ಪರಿಶಿಷ್ಟ ಜಾತಿಯ 27,24,768 ಕುಟುಂಬಗಳು ಮತ್ತು 1,07,01,982 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.

ಜನವರಿ 2025 ರಂದು ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿತ್ತು. ರಾಜ್ಯದಲ್ಲಿ ನಿಖರವಾದ ದತ್ತಾಂಶ ಇಲ್ಲದ ಕಾರಣ ಹೊಸದಾದ ಸಮೀಕ್ಷೆ ನಡೆಸಬೇಕೆಂದು 27-3-2025 ರಂದು ಆಯೋಗವು ಮಧ್ಯಂತರ ವರದಿ ಸಲ್ಲಿಸಿತ್ತು. ಅದೇ ದಿನವೇ ಸಚಿವ ಸಂಪುಟ ಮಧ್ಯಂತರ ವರದಿಯನ್ನು ಒಪ್ಪಿ, ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ನಿರ್ಣಯಿಸಿತ್ತು.

ಆಯೋಗ ಸುಪ್ರೀಂಕೋರ್ಟ್ ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನದ ಅನುಚ್ಛೇದ 14 ರಲ್ಲಿ ಅವಕಾಶವಿದ್ದು, ಉಪವರ್ಗೀಕರಣ ಮಾಡಿದರೆ ಮೀಸಲಾತಿ ಅನುಭವಿಸುತ್ತಿರುವ ಯಾರನ್ನೂ ಹೊರಗಿಡುವುದಿಲ್ಲ. ಅಗತ್ಯ ದತ್ತಾಂಶ ಸಂಗ್ರಹಿಸಿ ಒಳಜಾತಿಗಳ ವರ್ಗೀಕರಣ ಮಾಡಬೇಕು ಎಂದು ಆದೇಶಿಸಿತ್ತು.

ಅದರಂತೆ, ಒಳಜಾತಿಗಳ ವರ್ಗೀಕರಣಕ್ಕಾಗಿ ಶೈಕ್ಷಣಿಕ ಹಿಂದುಳಿದಿರುವಿಕೆ, ಸರ್ಕಾರಿ ಉದ್ಯೋಗದಲ್ಲಿ ಅಗತ್ಯ ಪ್ರಾತಿನಿಧ್ಯದ ಕೊರತೆ, ಸಾಮಾಜಿಕ ಹಿಂದುಳಿದಿರುವಿಕೆ, ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮತ್ತು ಸರ್ಕಾರದ ಸಂಸ್ಥೆಗಳಿಂದ ಸಂಗ್ರಹಿಸಿದ ದತ್ತಾಂಶವನ್ನು ವಿಶ್ಲೇಷಿಸಿ, ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಪರಿಶಿಷ್ಟ ಜಾತಿಯ ಒಳಜಾತಿಗಳನ್ನು ವರ್ಗೀಕರಿಸಿ ಲಭ್ಯವಿರುವ ಮೀಸಲಾತಿಯನ್ನು ಹಂಚಲಾಗಿದೆ.

Ads on article

Advertise in articles 1

advertising articles 2

Advertise under the article