ಬ್ರಹ್ಮಾವರ: ತಿಮರೋಡಿ ಕರೆತರುವಾಗ ವಾಹನ ಹಿಂಬಾಲಿಸಿ ಕರ್ತವ್ಯಕ್ಕೆ ಅಡ್ಡಿ- ಪೊಲೀಸ್ ವಾಹನಕ್ಕೆ ತಮ್ಮ ಕಾರನ್ನು ಡಿಕ್ಕಿ ಹೊಡೆದ ಮೂವರ ಬಂಧನ
ಬ್ರಹ್ಮಾವರ: ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಿಮರೋಡಿಯನ್ನು ಹಿಂಬಾಲಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಪೊಲೀಸರು ಸೂಚನೆ ನೀಡಿದರೂ ಕೇಳಿರಲಿಲ್ಲ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಮಾರ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ತಂಡದಲ್ಲಿದ್ದ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖೆ ವಾಹನಕ್ಕೆ ಗುದ್ದಿ ಆರೋಪಿತಯನ್ನು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದಾರೆ.ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಪ್ರಕರಣ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಲಾಗಿದ್ದು ಮುಂದಿನ ಕ್ರಮಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿದಿಸಿದೆ. ಜೊತೆಗೆ ಆರೋಪಿಗಳು ಕೃತ್ಯಕ್ಕೆ ಬಳಿಸಿ KA70M3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿದೆ.