ಬೆಂಗಳೂರು: ಮತಗಳ್ಳತನ ಆರೋಪ- ಇಂದು ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ಮತಗಳ್ಳತನ ಆರೋಪ- ಇಂದು ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ಅಕ್ರಮವನ್ನು ಖಂಡಿಸಿ ಇಂದು ( ಶುಕ್ರವಾರ) ಬೆಳಗ್ಗೆ 11:30 ರಿಂದ ನಗರದ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ.  

ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಇವತ್ತು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​ ನಾಯಕರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. 'ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ'ದ ಹೆಸರಿನಲ್ಲಿ ಚುನಾವಣಾ ಅಕ್ರಮ ಖಂಡಿಸಿ ಬೀದಿಗಿಳಿದು ಕಾಂಗ್ರೆಸ್ ನಾಯಕರು ಹೋರಾಟ ನಡೆಸಲಿದ್ದಾರೆ. ಪ್ರತಿಭಟನೆ ನಡೆಸಿದ ಬಳಿಕ ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣಾ  ಅಧಿಕಾರಿಗೆ ದೂರು ನೀಡಲಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ‌ ಮಹದೇವಪುರ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮದ ಬಗ್ಗೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. 

ಪರಿಸ್ಥಿತಿ ಆಧರಿಸಿ ಕಾಲ್ನಡಿಗೆಯಲ್ಲಿ ತೆರಳಿ ಮುಖ್ಯ ಚುನಾವಣಾಧಿಕಾರಿಗೆ ರಾಹುಲ್ ರಾಹುಲ್ ಗಾಂಧಿ ಅವರು ದೂರು ನೀಡಲಿದ್ದಾರೆ. ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಉಸ್ತುವಾರಿ ಸುರ್ಜೇವಾಲಾ, ಎಐಸಿಸಿ ಸಹ ಉಸ್ತುವಾರಿಗಳು, ಸಚಿವರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. 

ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆ ಇದೆ. ಸ್ವಾತಂತ್ರ್ಯ ಉದ್ಯಾನ, ವಿಧಾನಸೌಧದ ಸುತ್ತಮುತ್ತಲ ರಸ್ತೆಗಳು, ಚಾಲುಕ್ಯ ವೃತ್ತ, ಅರಮನೆ ರಸ್ತೆ, ನೃಪತುಂಗ ರಸ್ತೆ, ಮೈಸೂರು ಬ್ಯಾಂಕ್‌ ವೃತ್ತ ಹಾಗೂ ಮೆಜೆಸ್ಟಿಕ್‌ ಆಸುಪಾಸಿನಲ್ಲಿ ವಾಹನ ಚಾಲಕರು ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ಶುಕ್ರವಾರ ದಿನವಿಡೀ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article