
ಉಡುಪಿ: ವೇಶ್ಯಾವಾಟಿಕೆ ದಂಧೆ ಆರೋಪ- ಹೋಟೆಲ್ ಮೇಲೆ ಪೊಲೀಸರ ದಾಳಿ
25/08/2025 07:44 AM
ಉಡುಪಿ: ನಗರದ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಮಹಿಳಾ ಠಾಣೆ ಪೊಲೀಸರು ದಾಳಿ ನಡೆಸಿದ್ದು ಓರ್ವನ ಮೇಲೆ ಪ್ರಕರಣ ದಾಖಲಾಗಿದೆ.
ಆಗಸ್ಟ್ 24 ರಂದು ಮಂಜುನಾಥ ಬಡಿಗೇರ್, ಪೊಲೀಸ್ ನಿರೀಕ್ಷಕರು, ಉಡುಪಿ ನಗರ ಪೊಲೀಸ್ ಠಾಣೆ ಇವರಿಗೆ ಗೀತಾಂಜಲಿ ಸಿಲ್ಕ್ ಬಳಿಯ ಹೋಟೆಲ್‌ನಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತಿ ಬಂದಿತ್ತು.ಅದರಂತೆ ಹೋಟೆಲ್‌ಗೆ ಹೋಗಿ ರೂಮ್ ನಂಬ್ರ 308 ಕ್ಕೆ ದಾಳಿ ನಡೆಸಿ ರೂಮ್ ನಲ್ಲಿದ್ದ ಒಬ್ಬ ಮಹಿಳೆಯನ್ನು ವಿಚಾರಿಸಿದ್ದು, ಮಹಿಳೆಯನ್ನು ಉಡುಪಿಗೆ ಕೆಲಸ ಕೊಡಿಸುವುದಾಗಿ ಆಗಸ್ಟ್ 19 ರಂದು ಕರೆಸಿಕೊಂಡು ರೂಮ್‌ನ್ನು ಬುಕ್ ಮಾಡಿಸಿಕೊಟ್ಟು ವೇಶ್ಯಾವಾಟಿಕೆ ದಂಧೆ ನಡೆಸಿ, ಅಕ್ರಮ ಲಾಭ ಪಡೆಯುವ ಉದ್ದೇಶ ಹೊಂದಿರುವುದಾಗಿದೆ ಎಂದು ತಿಳಿದು ಬಂದಿದೆ.ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.