ಕಾರ್ಕಳ: ಕಾರ್ಕಳದ ಕುಂಟಲ್ಪಾಡಿಯಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಕೊಲೆ

ಕಾರ್ಕಳ: ಕಾರ್ಕಳದ ಕುಂಟಲ್ಪಾಡಿಯಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಕೊಲೆ

 


ಕಾರ್ಕಳ:  ಇಲ್ಲಿನ ಕುಂಟಲ್ಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ವ್ಯಕ್ತಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. 

ಕೊಲೆಯಾದ ವ್ಯಕ್ತಿ ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕಾರ್ಕಳ ಎಎಸ್ಪಿ ಹರ್ಷಂ ಪ್ರಿಯಮ್ ವಧಾ, ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ನಗರ ಠಾಣೆ ಎಸ್ಐ ಮುರಳೀಧರ್ ನಾಯ್ಕ್, ಗ್ರಾಮಾಂತರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್  ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪ್ರಾಥಮಿಕ ಮೂಲಗಳ ಪ್ರಕಾರ ನವೀನ್ ಪೂಜಾರಿ ಕಾರ್ಕಳದಲ್ಲಿ ಹಣಕಾಸು ವ್ಯವಹಾರವನ್ನು ನಡೆಸುತ್ತಿದ್ದರು ಎನ್ನಲಾಗಿದ್ದು ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ. 

Ads on article

Advertise in articles 1

advertising articles 2

Advertise under the article