
ಮೈಸೂರು: ಬಿಜೆಪಿಗೆ ತೀವ್ರ ಮುಖಭಂಗ: ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿದ ಮೈಸೂರು ಸಂಸದ ಯದುವೀರ್ ಒಡೆಯರ್
ಮಡಿಕೇರಿ: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.ಇದರೊಂದಿಗೆ ಈ ಆಯ್ಕೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಹಲವು ಬಿಜೆಪಿಯ ನಾಯಕರುಗಳಿಗೆ ಮುಖಭಂಗವಾದಂತಾಗಿದೆ.
ಕೊಡಗಿನ ವಿರಾಜಪೇಟೆಯಲ್ಲಿ ಮಾತಾನಾಡಿದ ಅವರು, ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು ಎಂದಿದ್ದಾರೆ. ಬಾನು ಮುಷ್ತಾಕ್ ಕ್ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದಿದ್ದಾರೆ.