
ಮಲ್ಪೆ:ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿ 14 ವರ್ಷಗಳ ಬಳಿಕ ಬಂಧನ !
18/08/2025 02:46 PM
ಮಲ್ಪೆ: ಕಳ್ಳತನ ಪ್ರಕರಣದಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮೊಹಮ್ಮದ್ ಸಮೀರ್ ಬಂಧಿತ ಆರೋಪಿ. ಮಂಗಳೂರು ನಿವಾಸಿಯಾದ ಈತನನ್ನು ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಮತ್ತು ಸಿಬ್ಬಂದಿ ಸುರೇಶ್, ವಿಶ್ವನಾಥ, ಕುಬೇರ ಅವರು ಮಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದಾರೆ. ಈತನ ವಿರುದ್ಧ ಮಲ್ಪೆ ಠಾಣೆಯಲ್ಲಿ 124/2011 ಕಲಂ:379 IPC ಅಡಿ ಪ್ರಕರಣ ದಾಖಲಾಗಿತ್ತು.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ.