ಉಡುಪಿ: ಕರಾವಳಿಯಲ್ಲಿ ಸೆ.1ರವರೆಗೆ ವ್ಯಾಪಕ ಮಳೆ ಸಾಧ್ಯತೆ

ಉಡುಪಿ: ಕರಾವಳಿಯಲ್ಲಿ ಸೆ.1ರವರೆಗೆ ವ್ಯಾಪಕ ಮಳೆ ಸಾಧ್ಯತೆ

 


ಉಡುಪಿ: ಒಡಿಶಾದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿನ್ನೂ ಕೆಲವು ದಿನಗಳ ಕಾಲ ಮಳೆ ಸುರಿಯಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆ. 27ರಿಂದ ಸೆ.1ರ ವರೆಗೆ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 30ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಆ.29ರ ವರೆಗೆ ಹಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜತೆಗೆ ಗಾಳಿಯ ವೇಗ ಪ್ರತಿ ಗಂಟೆಗೆ 40 ಕಿ.ಮೀ ಇರುವ ಸಾಧ್ಯತೆಗಳಿವೆ. ಬೆಂಗಳೂರಿನ ಕೆಲವು ಕಡೆ ಆ.26 ರಿಂದ 29ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.


ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ


ಕರ್ನಾಟಕ ಕರಾವಳಿ ತೀರದಲ್ಲಿ ಆ.28ರ ವರೆಗೆ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article