
ಉಡುಪಿ: ಸಂಸದ ಕೋಟ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169A ಪ್ರಗತಿ ಪರಿಶೀಲನಾ ಸಭೆ
16/08/2025 12:33 PM
ಉಡುಪಿ: ರಾಷ್ಟ್ರೀಯ ಹೆದ್ದಾರಿ 169A ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ವಿಷಯಗಳ ಚರ್ಚೆ ನಡೆಯಿತು. ಮುಖ್ಯವಾಗಿ ಪರ್ಕಳ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ, ಅಂಬಲಪಾಡಿ ಮತ್ತು ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಗಳನ್ನು ಶೀಘ್ರ ಮುಗಿಸುವಂತೆ ಸೂಚನೆ ನೀಡಲಾಯಿತು. ಸಭೆಯಲ್ಲಿ ಉಡುಪಿ ಶಾಸಕ ಎಶ್ಪಾಲ್ ಸುವರ್ಣ ,ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಉಪಸ್ಥಿತರಿದ್ದರು.