
ಉಡುಪಿ: ಆ. 18ರಂದು ಕರಾವಳಿಗೆ ರೆಡ್ ಅಲರ್ಟ್ ಘೋಷಣೆ- ಇನ್ನೆಡರು ದಿನ ಭಾರೀ ಮಳೆ ಸಾಧ್ಯತೆ
17/08/2025 03:15 AM
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿಯಲ್ಲಿ ಆ. 18ರಂದು ರೆಡ್ ಅಲರ್ಟ್ ಇರಲಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ. 17, 19 ಹಾಗೂ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 21, 22ರಂದು ಎಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆ. 16ರಿಂದ 19ರ ವರೆಗೆ ಅರಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲೆಯಲ್ಲಿ ಶನಿವಾರದಿಂದ ಮಳೆಯಾಗುತ್ತಿದ್ದು ಭಾನುವಾರ ತೀವ್ರತೆ ಪಡೆದುಕೊಂಡಿದೆ.