
ಉಡುಪಿ: ಮುಂದುವರೆದ ಮಳೆ- ಆ. 19 ( ಮಂಗಳವಾರ) ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
19/08/2025 12:51 AM
ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ,ಸರಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಆ.19 ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.ಮಳೆಯ ಕಾರಣ ಸೋಮವಾರವೂ ರಜೆ ಘೋಷಿಸಲಾಗಿತ್ತು.
ಉಳಿದಂತೆ ಪದವಿ, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ.