ಉಡುಪಿ: ಜಿಲ್ಲೆಯ ಒಟ್ಟು 207 ಜಂಕ್ಷನ್‌ಗಳಲ್ಲಿ 601 ಸಿಸಿ ಕ್ಯಾಮರಾ ಅಳವಡಿಕೆಗೆ ಮುಂದಾದ ಜಿಲ್ಲಾ ಪೊಲೀಸ್

ಉಡುಪಿ: ಜಿಲ್ಲೆಯ ಒಟ್ಟು 207 ಜಂಕ್ಷನ್‌ಗಳಲ್ಲಿ 601 ಸಿಸಿ ಕ್ಯಾಮರಾ ಅಳವಡಿಕೆಗೆ ಮುಂದಾದ ಜಿಲ್ಲಾ ಪೊಲೀಸ್

 

ಉಡುಪಿ: ಜಿಲ್ಲಾ ಪೊಲೀಸ್‌  “ಉಡುಪಿ ಜಿಲ್ಲಾ ಛೇಂಬರ್‌ ಆಫ್‌ ಕಾಮರ್ಸ್‌” ಇವರ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ಒಟ್ಟು 207 ಜಂಕ್ಷನ್‌ಗಳಲ್ಲಿ 601 ಕ್ಯಾಮರಾಗಳನ್ನು ಅಳವಡಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಯೋಜನೆಯ ವೆಚ್ಚ ಸುಮಾರು 2.5 ಕೋಟಿ ಆಗಬಹುದೆಂದು ಅಂದಾಜಿಸಲಾಗಿದೆ. ಇದರ ಪ್ರಾರಂಭಿಕ ಹಂತದಲ್ಲಿ ಜಿಲ್ಲೆಯ ಗಡಿ ಪ್ರದೇಶಗಳು, ಮತೀಯ ಕಲಹದ ಸ್ಥಳಗಳು ಹಾಗೂ ಆಯಕಟ್ಟಿನ ಸ್ಥಳಗಳಾದ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾಳ, ಹೊಸ್ಮಾರು, ಸಚ್ಚರಿಪೇಟೆ, ಕಾರ್ಕಳ ನಗರ ಪೊಲೀಸ ಠಾಣಾ ವ್ಯಾಪ್ತಿಯ ಸಾಣೂರು, ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಸೋಮೆಶ್ವರ, ಅಮಾಸೆಬೈಲು ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಸಂಗಡಿ, ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ದಳಿ, ಗಂಗೊಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಮೇಲ್‌ ಗಂಗೊಳ್ಳಿ, ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಮಲ್ಪೆ ಬೀಚ್‌ ಮತ್ತು ಉಡುಪಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಸಿಟಿ ಬಸ್‌ ನಿಲ್ದಾಣಗಳಲ್ಲಿ ಒಟ್ಟು 10 ಎ.ಎನ್.ಪಿ.ಆರ್. (Automatic Number Plate Reader) ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಉಡುಪಿ ನಗರಸಭಾ ವ್ಯಾಪ್ತಿಯ ಕಲ್ಸಂಕ ಜಂಕ್ಷನ್‌, ಕರಾವಳಿ ಜಂಕ್ಷನ್‌, ಇಂದ್ರಾಳಿ ಬ್ರಿಡ್ಜ್‌, ಸಂತೆಕಟ್ಟೆ ಜಂಕ್ಷನ್‌, ಸರ್ವಿಸ್‌ ಬಸ್‌ ನಿಲ್ದಾಣ ಮತ್ತು ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಹಾಗೂ ಕುಂದಾಪುರ ಉಪವಿಭಾಗ ವ್ಯಾಪ್ತಿಯ ಎಮ್‌ಕೋಡಿ ಜಂಕ್ಷನ್‌ ಮತ್ತು ಕಂಡ್ಲೂರು ಪೇಟೆ ಹಾಗೂ ಕಾರ್ಕಳ ಉಪವಿಭಾಗ ವ್ಯಾಪ್ತಿಯ ಬಾರಾಡಿ ಮತ್ತು ನಾರಾವಿ ಸ್ಥಳಗಳಲ್ಲಿ ಒಟ್ಟು 10 ಉತ್ತಮ ಗುಣಮಟ್ಟದ ಕೆಮರಾಗಳನ್ನು ಅಳವಡಿಸಲಾಗುವುದು. ಈ ರೀತಿಯಲ್ಲಿ ಅನುಷ್ಟಾನಗೊಂಡ ಕೆಮರಾಗಳ ವೀಕ್ಷಣೆಯನ್ನು ಸ್ಥಳೀಯ ಸಂಬಂಧಪಟ್ಟ ಠಾಣೆ ಹಾಗೂ ಜಿಲ್ಲಾ ಪೊಲೀಸ್‌ ಕಂಟ್ರೋಲ್‌ ರೂಮ್‌ನಲ್ಲಿ ನಿರಂತರವಾಗಿ ವೀಕ್ಷಣೆ ನಡೆಸಲಾಗುತ್ತದೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article