
ಉಡುಪಿ: 2.30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಬೈಲೂರು ಮುಖ್ಯ ರಸ್ತೆ ಕಾಮಗಾರಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ
ಉಡುಪಿ: ನಗರಸಭಾ ವ್ಯಾಪ್ತಿಯ ಚಂದು ಮೈದಾನ ಜಂಕ್ಷನ್ ನಿಂದ ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ , ಈ ಭಾಗದ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿದ್ದ ಚರಂಡಿ ಸಹಿತ ಕಾಂಕ್ರೀಟ್ ರಸ್ತೆಯ ಮನವಿಗೆ ಸ್ಪಂದಿಸಿ ಲೋಕೋಪಯೋಗಿ ಇಲಾಖೆಯ ಮೂಲಕ 1.50 ಕೋಟಿ ಅನುದಾನ ಹಾಗೂ ಉಡುಪಿ ನಗರಸಭೆಯಿಂದ 80 ಲಕ್ಷ ಅನುದಾನ ಒದಗಿಸಿ ಒಟ್ಟು 2.30 ಕೋಟಿ ವೆಚ್ಚದಲ್ಲಿ ರಸ್ತೆಯನ್ನು ಅಭಿವೃದ್ಧಿ ಮಾಡಲಾಗಿದ್ದು, ಜನರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ಮುಖಂಡರಾದ ಮಟ್ಟಾರ್ ರತ್ನಾಕರ ಹೆಗ್ಡೆ, ನವೀನ್ ಭಂಡಾರಿ, ಕಿರಣ್ ಕುಮಾರ್ ಬೈಲೂರು, ದುರ್ಗಾ ಪ್ರಸಾದ್, ನಾರಾಯಣ ದಾಸ್, ಮೋಹನ್ ಶೆಟ್ಟಿ, ಸುರೇಶ್ ಶೆಟ್ಟಿ, ರಂಜಿತ್ ದೇವಾಡಿಗ, ಸುನೀಲ್ ರಾಜ್, ಪ್ರಸಾದ್ ಪೂಜಾರಿ, ಅರುಣ್ ಶೆಟ್ಟಿಗಾರ್, ಶ್ರೀಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.