
ಉಡುಪಿ: ಭಾರಿ ಮಳೆ: ಇಂದು (ಅ.28) ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
27/08/2025 11:32 PM
ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು (ಅಗಸ್ಟ್ 28 ಗುರುವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಸಿದ್ದಾರೆ.ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು ಗಣೇಶ ಚತುರ್ಥಿ ಹಬ್ಬದ ಆಚರಣೆಗೂ ಆಡಚಣೆ ಉಂಟಾಗಿತ್ತು.ಸೆ.1 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.