
ಉಡುಪಿ:ಸೆ. 5 ಕ್ಕೆ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ- ಉಡುಪಿಯಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳ ಪೂರ್ವಭಾವಿ ಸಭೆ
28/08/2025 02:59 PM
ಉಡುಪಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಸೆಪ್ಟೆಂಬರ್ 5 ರಂದು ಧರ್ಮಸ್ಥಳದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ ಉಡುಪಿಯಲ್ಲಿ ನಡೆಯಿತು. ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಮುಖಂಡರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು. ಉಡುಪಿಯ ಶಾಸಕ ಯಶಪಾಲ್ ಸುವರ್ಣ, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸಹಿತ ಹಲವು ಜನಪ್ರತಿನಿಧಿಗಳು ,ಧಾರ್ಮಿಕ ಮುಖಂಡರು ಹಾಜರಿದ್ದರು. ಸಭೆಯಲ್ಲಿ ಕೃಷ್ಣಮಠದ ವತಿಯಿಂದ ಮಠದ ದಿವಾನ ನಾಗರಾಜ ಆಚಾರ್ಯ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.