ಬೆಂಗಳೂರು: ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣ-  ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ- ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣ- ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ- ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

 

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು ದೋಷಿ ಎಂದಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು,  ಎಷ್ಟು ಪ್ರಮಾಣದ ಶಿಕ್ಷೆ ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ ಎನ್ನಲಾಗಿದೆ.ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರು ಒರೆಸುತ್ತಲೇ ಅಲ್ಲಿಂದ ತೆರಳಿದರು.

Ads on article

Advertise in articles 1

advertising articles 2

Advertise under the article